ಆರ್‌ಎಸ್‌ಎಸ್ ಮೆರವಣಿಗೆ ವೇಳೆ ಉದ್ವಿಗ್ನತೆ; ಎರಡು ಕೇಸ್ ದಾಖಲು

Ravi Talawar
ಆರ್‌ಎಸ್‌ಎಸ್ ಮೆರವಣಿಗೆ ವೇಳೆ ಉದ್ವಿಗ್ನತೆ; ಎರಡು ಕೇಸ್ ದಾಖಲು
WhatsApp Group Join Now
Telegram Group Join Now

ರತ್ನಗಿರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮೆರವಣಿಗೆ ವೇಳೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಘೋಷಣೆ ಕೂಗಿದ ನಂತರ ಉದ್ವಿಗ್ನ ಪರಿಸ್ಥಿತಿವೇರ್ಪಟ್ಟ ಘಟನೆ ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಕೊಂಕಣನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಕೆಲ ಸಮಯದ ನಂತರ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.

ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದೂರು ಆಧರಿಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ, ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಎಂದು ರತ್ನಗಿರಿ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article