ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರು ಗಾಯ

Ravi Talawar
ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರು ಗಾಯ
WhatsApp Group Join Now
Telegram Group Join Now

ಉಡುಪಿ, ಮೇ 08: ಕಾರ್ಕಳ  ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಸಿಡಿಮದ್ದು ತಯಾರಿಸಲಾಗುತ್ತಿತ್ತು. ಒಂದು ಕಟ್ಟಡದಲ್ಲಿ ಇಂದು (ಮೇ 08) ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣ ಹಾನಿಯಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

WhatsApp Group Join Now
Telegram Group Join Now
Share This Article