ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು 

Ravi Talawar
ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು 
WhatsApp Group Join Now
Telegram Group Join Now

ದಕ್ಷಿಣ ಕನ್ನಡ, ಜು.03: ಮಂಗಳೂರುನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ.

ಈ ಹಿನ್ನಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಮಣ್ಣಿನಡಿಯಲ್ಲಿರುವ  ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ‌ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್‌ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ  ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದು,  ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ. ಅದರಂತೆ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನಿಗಾಗಿ ಕಾರ್ಯಾಚರಣೆ ಮುಂದವರೆದಿದೆ.

WhatsApp Group Join Now
Telegram Group Join Now
Share This Article