ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಯಾ ಟುಡೇ ಈ ಕುರಿತು ವರದಿ ಮಾಡಿದೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಪ್ರಸ್ತುತ ರಾಜ್ಯದ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿದ್ದಾರೆ ಶೀಘ್ರವೇ ಅವರು ಉಪಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಉದಯನಿಧಿ ಸ್ಟಾಲಿನ್ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿರುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಅನುಷ್ಠಾನದ ಪ್ರಮುಖ ಖಾತೆಯನ್ನು ಸಹ ನಿರ್ವಹಿಸುತ್ತಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು ಮಲೇರಿಯಾ ಮತ್ತು ಡೆಂಗ್ಯೂ ರೀತಿಯಲ್ಲಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ವಿವಿಧ ವಲಯಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.