ಮುಂಬೈ(ಮಹಾರಾಷ್ಟ್ರ): ಇಲ್ಲಿನ ಸರ್ಕಾರ ತ್ರಿಭಾಷಾ ಸೂತ್ರಕ್ಕೆ ಸಂಬಂಧಿಸಿದ ಎರಡು ಸುಗ್ರೀವಾಜ್ಞೆಗಳನ್ನು ರದ್ದುಗೊಳಿಸಿದ ಹಿನ್ನೆಲೆ ಮುಂಬೈನಲ್ಲಿಂದು ಮರಾಠಿ ವಿಜಯೋತ್ಸವ ರ್‍ಯಾಲಿಯನ್ನು ಆಯೋಜಿಸಲಾಗಿದೆ. ಈ ರ್‍ಯಾಲಿಯಲ್ಲಿ ಶಿವಸೇನೆ(ಯುಟಿಬಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ರ್‍ಯಾಲಿಯಲ್ಲಿ ಠಾಕ್ರೆ ಸಹೋದರರು ಏನು ಮಾತನಾಡುತ್ತಾರೆ ಎಂಬುದರ ಬಗ್ಗೆ ಎಲ್ಲರ ಗಮನ ನೆಟ್ಟಿದೆ.
ಕೆಲವು ತಿಂಗಳುಗಳಿಂದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಒಂದಾಗುತ್ತಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು. ಈ ಸಂದರ್ಭದಲ್ಲಿ, ಮರಾಠಿ ವಿಜಯೋತ್ಸವ ರ್‍ಯಾಲಿ ಮಹತ್ವ ಪಡೆದಿದೆ.