ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Ravi Talawar
ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
WhatsApp Group Join Now
Telegram Group Join Now

ಗದಗ ಅಕ್ಟೋಬರ್ 8 : 2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಇತ್ತೀಚೆಗೆ 2025-26 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ ( ಮೂರು) 03 ಕ್ವಿಂಟಲ್‌ನAತೆ ಗರಿಷ್ಟ 15 ( ಹದಿನೈದು) ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಖರೀದಿಸಲು ಹಾಗೂ ಶೇಂಗಾ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಶೇಂಗಾ ಉತ್ಪನ್ನವನ್ನು ಖರೀದಿಸಿದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ / ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗಳಿಗೆ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಸಂಬAಧಪಟ್ಟ ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕು. ಸರ್ಕಾರ ಬೆಂಬಲ ಬೆಲೆಯಲ್ಲಿ ಶೇಂಗಾ ಹುಟ್ಟುವಳಿಯ ಖರೀದಿ ಕುರಿತು ರೈತರು ಸದುಪಯೋಗ ಪಡೆದುಕೊಳ್ಳಲು ರೈತರಿಗೆ ತಿಳುವಳಿಕೆ ನೀಡಬೇಕು.ಹೆಚ್ಚಿನ ಸಂಖ್ಯೆಯಲ್ಲಿ ಗದಗ ಜಿಲ್ಲೆಯ ರೈತರು ಯೋಜನೆಯ ಲಾಭ ಪಡೆಯುಲು ಅನುಕೂಳವಾಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7263 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸದರಿ ಆದೇಶ ಹೊರಡಿಸಿದ ದಿನಾಂಕದಿAದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸರ್ಕಾರದ ಆದೇಶದನುಸಾರ ನ್ಯಾಫೆಡ್ ಸಂಸ್ಥೆ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆಓಎಫ್) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದೆ ಎಂದು ಸಭೆಗೆ ವಿವರಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಶೇಂಗಾ ಖರೀದಿ ಕೇಂದ್ರಗಳ ಸ್ಥಳ: ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳು: ಗದಗ ತಾಲೂಕಿನ ಬಳಗಾನೂರ, ಹೊಂಬಳ, ಮುಳಗುಂದ; ಶಿರಹಟ್ಟಿ ತಾಲೂಕಿನ ರಣತೂರ, ಶಿಗ್ಲಿ ; ರೋಣ ತಾಲೂಕಿನ ಅಬ್ಬಿಗೇರಿ, ಗಜೇಂದ್ರಗಡ ; ನರಗುಂದ ತಾಲೂಕಿನ ಕಣಕಿಕೊಪ್ಪ , ಮುಂಡರಗಿ ತಾಲೂಕಿನ ಬರದೂರು, ಕಲಕೇರಿ.
ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Group Join Now
Telegram Group Join Now
Share This Article