ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕೇಂದ್ರ ಬಜೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಬಜೆಟ್ ಜನಪರ, ರೈತ ಪರವಾಗಿರುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಯಾವ ವರ್ಗಕ್ಕೂ ನಯಾಪೈಸೆ ಲಾಭವಿಲ್ಲದ ನಿರಾಶಾದಾಯಕ ಬಜೆಟ್ ಆಗಿದೆ. ಮೋದಿ ಸರ್ಕಾರದ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ. ಮಧ್ಯಮ ಮತ್ತು ಬಡವರ್ಗ ಸೇರಿದಂತೆ ಯಾರಿಗೂ ಬಜೆಟ್ನಿಂದ ಅನುಕೂಲವಾಗಿಲ್ಲ ಎಂದು ಅಸಮಾದಾನ ವ್ಯಕ್ತ ಪಡಿಸಿದ್ದಾರೆ.
ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಮತ್ತು ಅದಕ್ಕೆ ಸಂಬಂಧಿಸಿ ವಿಷಯದಲ್ಲಿ ಬಜೆಟ್ನಲ್ಲಿ ಏನೂ ಇಲ್ಲ. ಸರ್ಕಾರಿ ಉದ್ಯೋಗದ ಬಗ್ಗೆಯೂ ಬಜೆಟ್ನಲ್ಲಿ ಯಾವುದೇ ಮಾರ್ಗಸೂಚಿ ಇಲ್ಲ. ನಿರುದ್ಯೋಗದ ಕುರಿತು ಬಜೆಟ್ನಲ್ಲಿ ಯಾವುದೇ ದೃಷ್ಟಿಕೋನಗಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹರಿಹಾಯ್ದರು.