ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ? ಕೇಂದ್ರ ಸಚಿವ ಕುಮಾರಸ್ವಾಮಿ ಸಿದ್ದರಾಮಯ್ಯಗೆ ಮರುಪ್ರಶ್ನೆ

Ravi Talawar
ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ? ಕೇಂದ್ರ ಸಚಿವ ಕುಮಾರಸ್ವಾಮಿ ಸಿದ್ದರಾಮಯ್ಯಗೆ ಮರುಪ್ರಶ್ನೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 60% ಕಮೀಶನ್! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದಿದ್ದಾರೆ.

ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ.

ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಎಚ್.ಡಿ ಕೆ ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article