ಕೇಂದ್ರ ಸಚಿವ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ; ತನಿಖೆ ಚುರುಕು

Ravi Talawar
ಕೇಂದ್ರ ಸಚಿವ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ; ತನಿಖೆ ಚುರುಕು
WhatsApp Group Join Now
Telegram Group Join Now

ಗಯಾ, ಏಪ್ರಿಲ್ 10: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತಳನ್ನು ಸುಷ್ಮಾದೇವಿ ಎಂದು ಗುರುತಿಸಲಾಗಿದೆ. ಸುಷ್ಮಾ ದೇವಿ ಅವರ ಪತಿ ರಮೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಸ್ತುತ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ ಪತಿಗಾಗಿ ದಾಳಿ ನಡೆಸುತ್ತಿದ್ದಾರೆ.

ಅವರಿಬ್ಬರೂ 14 ವರ್ಷಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರು, ಮೃತರ ಸಹೋದರಿ ಮತ್ತು ಮಕ್ಕಳು ಮನೆಯಲ್ಲಿ ಇನ್ನೊಂದು ಕೋಣೆಯಲ್ಲಿದ್ದರು. ಗುಂಡಿನ ಶಬ್ದ ಕೇಳಿ ಮೃತನ ಸಹೋದರಿ ಮತ್ತು ಮಕ್ಕಳು ಸ್ಥಳಕ್ಕೆ ಬಂದರು. ಅದೇ ಸಮಯದಲ್ಲಿ, ಗುಂಡೇಟಿನ ಸದ್ದು ಕೇಳಿ ಅಕ್ಕಪಕ್ಕದ ಮನೆಯವರು ಕೂಡ ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಬುಧವಾರ ರಮೇಶ್ ಸಿಂಗ್ ಅವರ ಮನೆಗೆ ಬಂದು ಪತ್ನಿ ಸುಷ್ಮಾ ದೇವಿಯನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು ಬಾಗಿಲು ಲಾಕ್ ಮಾಡಿ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಗುಂಡು ಸುಷ್ಮಾ ದೇವಿಯ ಎದೆಗೆ ತಗುಲಿತ್ತು. ಕೊಲೆ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಶೀಘ್ರದಲ್ಲೇ ಆರೋಪಿ ಪತಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Share This Article