ಬೆಳಗಾವಿ.ಭಾರತದ ಉಕ್ಕಿನ ಮನುಷ್ಯ ಸರದಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ “ಏಕತಾ ನಡಿಗೆ ಅಭಿಯಾನ”ಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರು ಚಾಲನೆ ಏಕತಾ ನಡಿಗೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರ ಗೀತಾ ಸುತಾರ, ಮಾಜಿ ಸಂಸದರಾದ ಮಂಗಲಾ ಅಂಗಡಿ, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಮಂಗೇಶ್ ಪವಾರ್, ಉಪಮಹಾಪೌರರಾದ ವಾಣಿ ಜೋಶಿ, ಪ್ರಮುಖರಾದ ಡಾ. ರವಿ ಪಾಟೀಲ,ಎಂ.ಬಿ ಜಿರಲಿ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು, ನಗರ ಸೇವಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


