ಹುನಗುಂದ: ಪಟ್ಟಣದ ವಿ.ಎಮ್.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ. ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಬಿ.ಎಸ್ಸಿ. ತೃತೀಯ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಯಾದ ವರುಣ ಮುರಗೇಂದ್ರ ಅಥಣಿಮಠ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಖೇಲೋ ಇಂಡಿಯಾ ಗೇಮ್ಸ್ ಗೆ ಆಯ್ಕೆಯಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾನೆ ಎಂದು ಕ್ರೀಡಾ ನಿರ್ದೇಶಕರಾದ ಲೆಫ್ಟಿನೆಂಟ್ ಎಸ್.ಬಿ. ಚಳಗೇರಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯದಿಂದ ಆಯ್ಕೆಯಾಗಿ ಬಾಗಲಕೋಟೆ ಪಂಜಾಬ್ ರಾಜ್ಯದ ಚಂಡೀಗಡದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕುಸ್ತಿ ಪಂದ್ಯಾವಳಿಯಲ್ಲಿ ಈ ಸಾಧನೆ ಮಾಡಿದ್ದಾರೆ.
ಸಾಧಕ ಕ್ರೀಡಾ ಪಟುವಿಗೆ ಹಾಗೂ ಕ್ರೀಡಾ ನಿರ್ದೇಶಕರಿಗೆ ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಎಸ್. ಕಡಪಟ್ಟಿ, ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಆರ್. ಗೋಲಗೊಂಡ, ಐ.ಕ್ಯೂ.ಎ.ಸಿ ಸಂಯೋಜಕ ಡಾ. ಎಲ್. ಎನ್. ಕುಲಕರ್ಣಿ, ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಬಿ.ಎಂ ಹಲಸಂಗಿ, ಮಹಾವಿದ್ಯಾಲಯದ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದಾರೆ.


