ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ

Ravi Talawar
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಜೂನ್​ 22ರಿಂದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಕೊಟ್ಟಿಗೆಹಾರ, ಧರ್ಮಸ್ಥಳ, ಕಾರ್ಕಳ, ಕಕ್ಕೇರಿ, ಯುಗಟಿ, ಮಂಗಳೂರು, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಮಾಣಿ, ಬೆಳ್ತಂಗಡಿ, ಹೊನ್ನಾವರ, ಭಾಗಮಂಡಲ, ಮುಲ್ಕಿ, ಕುಶಾಲನಗರ, ಕುಮಟಾ, ಪಣಂಬೂರು, ಪರಶುರಾಂಪುರ, ತೊಂಡೇಭಾವಿಯಲ್ಲಿ ಮಳೆಯಾಗಿದೆ.

ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

WhatsApp Group Join Now
Telegram Group Join Now
Share This Article