ನವದೆಹಲಿ : ಇಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ಇಂಡಿಯಾ ಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
ಒಟ್ಟಾರೆಯಾಗಿ 782 ಸಂಸದರು (ಲೋಕಸಭೆ ಮತ್ತು ರಾಜ್ಯಸಭೆಯಿಂದ) ತಮ್ಮ ಮತ ಚಲಾಯಿಸುವ ಹಕ್ಕು ಹೊಂದಿದ್ದು, ಇಬ್ಬರೂ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಸಂವಿಧಾನದ 66(1) ನೇ ವಿಧಿಯ ಪ್ರಕಾರ, ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯಸಭೆಯ ಚುನಾಯಿತ ಸದಸ್ಯರು, ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ ಚುನಾಯಿತ ಸದಸ್ಯರು ಆಯ್ಕೆ ಮಾಡಲಿದ್ದಾರೆ. ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಂಸತ್ ಭವನದಲ್ಲಿ ಮತದಾನ ಪ್ರಾರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ.
324 ನೇ ವಿಧಿಯ ಅಡಿ ಭಾರತದ ಚುನಾವಣಾ ಆಯೋಗವು (ECI) ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಯನ್ನು ನಡೆಸುವ ಅಧಿಕಾರವನ್ನು ಹೊಂದಿದೆ.