ಬಳ್ಳಾರಿ. ಮಾ. 25: ಇತ್ತೀಚೆಗೆ ಹೊಸಪೇಟೆಯ ವಿಜಯನಗರ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಪುರುಷ ಮತ್ತು ಮಹಿಳಾ ಖೋ ಖೋ ಪಂದ್ಯಾವಳಿಯಲ್ಲಿ ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ವಿಜೇತರಾಗಿ ಪ್ರಶಸ್ತಿಯನ್ನು ಪಡೆದಿವೆ.
ಪುರುಷ ತಂಡವು ಫೈನಲ್ ಪಂದ್ಯದಲ್ಲಿ ಬಳ್ಳಾರಿ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆಯಿತು ಹಾಗೂ ಮಹಿಳಾ ತಂಡವು ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿತು.
ವಿಜೇತ ತಂಡದ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಲಾ, ಪುರಸಭೆಯ ಅಧ್ಯಕ್ಷರಾದ ಪಿ. ಶೇಖಣ್ಣ, ದೈಹಿಕ ಶಿಕ್ಷಣ ನಿರ್ದೇಶಕರಾದ ಪಂಪನಗೌಡ ಸೇರಿದಂತೆ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


