ವಿಜಯಪುರ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರಿಗೆ ಸನ್ಮಾನ

Ravi Talawar
ವಿಜಯಪುರ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರಿಗೆ ಸನ್ಮಾನ
WhatsApp Group Join Now
Telegram Group Join Now
ವಿಜಯಪುರ : ವಿಜಯಪುರ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿದ ಡಾ. ಆನಂದ ಕೆ ಇವರನ್ನು ಆತ್ಮೀಯವಾಗಿ ಸ್ವಾಗತಿಸಿ ಹೃದಯ ಪೂರ್ವಕ ಸನ್ಮಾನ ಮಾಡಿ ವಿಜಯಪುರ ಜಿಲ್ಲೆಯ ಸಮಗ್ರ ಕುಂದು ಕೊರತೆಯನ್ನು ನಿವಾರಿಸುವಲ್ಲಿ ಮುಂದಾಗಿ ಎಂದು ನಾವು ನಿಮ್ಮೊಂದಿಗಿದ್ದೇವೆ ಎಂದು ಹರ್ಷ ವ್ಯಕ್ತಪಡಿಸುವುದರೊಂದಿಗೆ ಮಹರ್ಷಿ ವಾಲ್ಮೀಕಿಯ ಭಾವಚಿತ್ರವನ್ನು ನೀಡುವುದರ ಮೂಲಕ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ನಗರ ಪ್ರದೇಶದಲ್ಲಿ ವಾಲ್ಮೀಕಿ ಸಮುದಾಯ ಭವನ ಮಂಜೂರ ಆಗದೇ ಕಳೆದ ೧೫ ವರ್ಷಗಳಿಂದ ನೆನೆಗುದಿಗೆ ಬಿದಿದ್ದು ಅದನ್ನು ತಾವು ಗಂಭೀರವಾಗಿ ಪರಿಗಣಿಸಿ ಸರ್ಕಾರದೊಂದಿಗೆ ಚರ್ಚಿಸಿ ಹಣ ಮಂಜೂರು ಮಾಡುವಲ್ಲಿ ಯಶಸ್ವಿಯಾಗಿ ವಾಲ್ಮೀಕಿ ಸಮುದಾಯದ ಜನಾಂಗಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.  ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಟಗಿ, ಸಾರವಾಡ ಗ್ರಾ.ಪಂ. ಅಧ್ಯಕ್ಷ ಎಮ್.ಎಸ್. ಪಾಟೀಲ, ಉಪಾಧ್ಯಕ್ಷ ಆನಂದ ಸೋಮಕನವರ ಹಾಗೂ ಇತರರು ಇದ್ದರು.
WhatsApp Group Join Now
Telegram Group Join Now
Share This Article