ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ

Ravi Talawar
ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ
WhatsApp Group Join Now
Telegram Group Join Now
ಬೆಳಗಾವಿ: ಡ್ರಗ್ ಮಾಫಿಯದ ಹಿಂದಿರುವ ಬಲಾಢ್ಯರು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ವತಿಯಿಂದ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾತನಾಡಿದರು. ಸರಕಾರವು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕೇವಲ ಸಣ್ಣಪುಟ್ಟ ವ್ಯಕ್ತಿಗಳನ್ನು ಬಂಧಿಸಿದರೆ ಸಾಲದು ಎಂದು ಒತ್ತಾಯಿಸಿದರು.
ಅಲ್ಲಿ ಇಲ್ಲಿ ಸಣ್ಣಪುಟ್ಟ ಡ್ರಗ್, ಗಾಂಜಾ ಮಾರಾಟಗಾರರನ್ನು ಬಂಧಿಸಿ ಆಮೇಲೆ ಜಾಮೀನಿನಲ್ಲಿ ಬಿಡುತ್ತಿದ್ದಾರೆ. ಸಮಸ್ಯೆಗಳ ಮೂಲಕ್ಕೆ ಹೋಗುತ್ತಿಲ್ಲ. ಎಲ್ಲಿಂದ ಸರಬರಾಜಾಗುತ್ತಿದೆ ಎಂದು ವಿವರ ಪಡೆಯುವುದು ಪೊಲೀಸರಿಗೆ ಕಷ್ಟದ ಕೆಲಸವಲ್ಲ ಎಂದು ತಿಳಿಸಿದರು.
ರಾಜ್ಯದ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಮಾದಕವಸ್ತು ಕುರಿತಂತೆ ಜಾಗೃತಿ ಮೂಡಿಸುವ ಕೆಲಸವೂ ಆಗಬೇಕಿದೆ ಎಂದು ಅವರು ನುಡಿದರು. ಆಗ ಮಾತ್ರ ರಾಜ್ಯ ಸರಕಾರ ಎಚ್ಚತ್ತುಕೊಳ್ಳುತ್ತದೆ. ಇಲ್ಲವಾದರೆ ಕುಂಭಕರ್ಣ ನಿದ್ರೆಯಲ್ಲಿರುವ ರಾಜ್ಯ ಸರಕಾರ, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಾ.ಜ.ಪಾ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಶಾಸಕರಾದ ಧೀರಜ್ ಮುನಿರಾಜು, ಹರೀಶ್ ಪೂಂಜಾ, ರಾಜ್ಯ ವ್ಯಾಪಾರ ವಾಣಿಜ್ಯ ಪ್ರಕೋಷ್ಠ ಸಂಚಾಲಕ ವಿಜಯಕುಮಾರ ಕೊಡಗನೂರ,ಸಹ ಸಂಚಾಲಕರಾದ ಭವಾನಿ ಮೋರೆ, ರಾಜ್ಯ ಸಮಿತಿ ಸದಸ್ಯರಾದ ಜ್ಯೋತಿ ಶೆಟ್ಟಿ, ಪಿ.ಆರ್ ಸಂಜಯ್, ಚನ್ನಬಸಪ್ಪ ಹೊಸುರ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ,ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಶರತ್, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ಚೇತನ್ ಕತ್ತಿ ,ಭರತ ಕುಲಕರ್ಣಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article