ಬೆಳಗಾವಿ: ನಾಳೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ರವರು ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ 6 ನೇ ದಿನದ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ ರೂ 3500/ ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್ ದಲ್ಲಿ ನಡೆಯುತ್ತಿರುವ ಆಹೋರಾತ್ರಿ ಹೋರಾಟದಲ್ಲಿ ಭಾಗವಹಿಸಲು ನಾಳೆ ಮಂಗಳವಾರ ದಿನಾಂಕ 04-11-2025 ರಂದು ಬಿಜೆಪಿ ರಾಜ್ಯಾದ್ಯಾಕ್ಷರಾದ ಬಿ ವೈ ವಿಜಯೇಂದ್ರ ರವರು ಆಗಮಿಸಲಿದ್ದಾರೆ ರೈತರು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿ ಗೊಳಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


