ಬಳ್ಳಾರಿ. ಫೇ. 10…: ನಗರದ ನಾಗಲಕೆರೆಯಲ್ಲಿರುವ ಅತಿ ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕೆಲವು ಕಿಡಿಗೇಡಿಗಳು ಮಾಂಸವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಟ್ಟು ದೇವಸ್ಥಾನದ ಒಳಗಡೆ ಎಸೆದಿರುವುದು ಬಹಳ ಖಂಡನೀಯ ಪೊಲೀಸರು ಸೂಕ್ತ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಪದಾಧಿಕಾರಿಗಳು ಆಗ್ರಹಿಸಿದರು.
ಇಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ಈ ದೇವಸ್ಥಾನವು ಹಲವಾರು ವರ್ಷಗಳ ಹಿಂದೆ ಪ್ರತಿಷ್ಠಿತವಾಗಿದ್ದು ಭಕ್ತಾದಿಗಳು ಪ್ರತಿನಿತ್ಯ ಪೂಜೆ ಪುರಸ್ಕಾರಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ, ಈ ಇಂತಹ ಪವಿತ್ರವಾದ ದೇವಸ್ಥಾನದಲ್ಲಿ ಕಿಡಿಗೇಡಿಗಳು ಮಾಂಸವನ್ನು ಹಾಕಿರುವುದನ್ನು ವಿ ಎಚ್ ಪಿ ಮತ್ತು ಬಜರಂಗದಳ ಅತ್ಯಂತ ಉಗ್ರವಾಗಿ ಖಂಡಿಸುತ್ತದೆ ಮತ್ತು ಹಿಂದುಗಳ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚಾನಾಳ್ ವಿಷ್ಣುವರ್ಧನ್ ರೆಡ್ಡಿ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಸಿ.ಸಿ. ಟಿ.ವಿ. ಕ್ಯಾಮರಾಗಳನ್ನು ಅಳವಡಿಸಲು ಆಯಾ ದೇವಸ್ಥಾನಗಳಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.
ಈ ಪ್ರತಿಭಟನಾ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗೋವರ್ಧನ್ ಪುರೋಹಿತ್, ಜಿಲ್ಲಾ ಕಾರ್ಯದರ್ಶಿ ಚಾನಾಳ್ ವಿಷ್ಣುವರ್ಧನ್ ರೆಡ್ಡಿ, ಜಿಲ್ಲಾ ಸಂಯೋಜಕ ವಿನೋದ್, ಭಜರಂಗದಳ ಜಿಲ್ಲಾ ಸಹಕಾರ್ಯದರ್ಶಿ ಶಂಕರ್ ರಾವ್ ವಿಶ್ವ ಹಿಂದೂ ಪರಿಷದ್ ಬಳ್ಳಾರಿ ವಿಭಾಗ ಕಾರ್ಯದರ್ಶಿ ಕೆ. ಅಶೋಕ್, ವಿ ಎಚ್ ಪಿ ನಗರ ಅಧ್ಯಕ್ಷ ಅಶೋಕ್ ಚೌಹ್ವಾನ್ ಸೇರಿದಂತೆ ಇತರರಿದ್ದರು


