ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ. ಇದರ ನೂತನ ಪ್ರಧಾನ ಕಛೇರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರು ಸೌಹಾರ್ದಯುತವಾಗಿ ಭೇಟಿ ನೀಡಿದರು.
ಸರಳತೆಯ ಸಂತ ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಮೃತ ಹಸ್ತದಿಂದ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯೊಂದಿಗೆ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ಸಹಕಾರಿ ಸಂಸ್ಥೆಯು ಗ್ರಾಮೀಣ ಪ್ರದೇಶದ ಜನರಿಗೆ ಅತ್ಯುತ್ತಮ ಹೂಡಿಕೆಯ ಅವಕಾಶಗಳನ್ನು ನೀಡಿ ವಾಹನ ಖರೀದಿ, ಕೃಷಿ, ಹೈನುಗಾರಿಕೆ, ಗೃಹ ನಿರ್ಮಾಣ, ವ್ಯಾಪಾರ, ಗುಡಿ ಕೈಗಾರಿಕೆ ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ನೀಡಿ ಜನರ ಆರ್ಥಿಕ ಅಗತ್ಯಗಳನ್ನು ಪೂರೈಸುವ ಮೂಲಕ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಾಯ ಮಾಡುತ್ತಿರುವ ಸಹಕಾರಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.
ಸಹಕಾರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸಂಸ್ಥೆಯ ಪ್ರಗತಿಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಅನೇಕರನ್ನು ಸನ್ಮಾನಿಸಿದರು.
ಈ ಸಮಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪಿ. ರಾಜೀವ, ಡಾ. ವಿಶ್ವನಾಥ ಪಾಟೀಲ, ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಲಕ್ಷ್ಮಣ ತಪಸಿ, ಎಫ್. ಎಸ್. ಸಿದ್ದನಗೌಡರ, ಮಹಾಂತೇಶ ವಕ್ಕುಂದ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸತೀಶ ಕಡಾಡಿ, ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ನಿರ್ದೆಶಕರಾದ ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಶಿವಪ್ಪ ಗೋಸಬಾಳ, ಸಿದ್ದಪ್ಪ ಹೆಬ್ಬಾಳ, ಸೋಮನಿಂಗ ಹಡಗಿನಾಳ, ಕಾಡೇಶ ಗೋರೋಶಿ, ಅಡಿವೆಪ್ಪ ಕುರಬೇಟ, ಪ್ರಭು ಕಡಾಡಿ, ತುಕಾರಾಮ ಪಾಲಕಿ, ದಶಗೀರ ಕಮತನೂರ, ಬಸವರಾಜ ಕಡಾಡಿ, ಹಣಮಂತ ಸಂಗಟಿ ಸೇರಿದಂತೆ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


