ಬೆಂಗಳೂರು: ಮೊಣಕಾಲಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯುಗಾದಿ ಹಬ್ಬ ಮುಗಿದ ನಂತರ ನಂತರ ನಾಡಿದ್ದು ಏಪ್ರಿಲ್ 2 ರಂದು ದೆಹಲಿಗೆ ನಾಲ್ಕು ದಿನಗಳ ಭೇಟಿ ನೀಡಲಿದ್ದಾರೆ. ತಮ್ಮ ಸಂಪುಟದ ಸಹೋದ್ಯೋಗಿಗಳ ಹಿತ ಕಾಪಾಡುವುದರ ಜೊತೆಗೆ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಿಕೊಳ್ಳಲು ಅವರು ಹೈಕಮಾಂಡ್ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಶುಕ್ರವಾರ ಅವರ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಸೇರಿದಂತೆ ಕೆಲವು ಪ್ರಸ್ತಾಪಗಳನ್ನು ಸಿದ್ದರಾಮಯ್ಯನವರು ಭೇಟಿ ಮಾಡಿದ ಸಂದರ್ಭದಲ್ಲಿ ಮುಂದಿಡಲು ವೇದಿಕೆ ಸಿದ್ಧಪಡಿಸಿದ್ದರು ಎಂದು ಮೂಲಗಳು ಹೇಳುತ್ತವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರ ಸ್ಥಾನಕ್ಕೆ ತಮ್ಮ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಸತೀಶ್ ಜಾರಕಿಹೊಳಿ ಆಶಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯನವರ ದೆಹಲಿ ಭೇಟಿ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಕೂಡ ಇರುತ್ತಾರೆ. ಅವರು ದೆಹಲಿಯಲ್ಲಿ ಕರ್ನಾಟಕ ಭವನ -3 ನ್ನು ಉದ್ಘಾಟಿಸಲಿದ್ದಾರೆ. ಏಪ್ರಿಲ್ 3 ಮತ್ತು 4 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಏಪ್ರಿಲ್ 5 ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.