ಜಿಲ್ಲಾ ಸ್ವೀಪ್ | ಮುಂಬತ್ತಿ ಬೆಳಕಿನಲ್ಲಿ ಅರಳಿದ ಭಾರತ ನಕ್ಷೆ ಬೇವಿನಮಟ್ಟಿಯಲ್ಲಿ ಮತದಾನ ಜಾಗೃತಿ ಅಭಿಯಾನ

MK HasiruKranti
ಜಿಲ್ಲಾ ಸ್ವೀಪ್ | ಮುಂಬತ್ತಿ ಬೆಳಕಿನಲ್ಲಿ ಅರಳಿದ ಭಾರತ ನಕ್ಷೆ ಬೇವಿನಮಟ್ಟಿಯಲ್ಲಿ ಮತದಾನ ಜಾಗೃತಿ ಅಭಿಯಾನ
WhatsApp Group Join Now
Telegram Group Join Now
ಬಾಗಲಕೋಟೆ : ಮಾರ್ಚ ೨೮ (ಕರ್ನಾಟಕ ವಾರ್ತೆ) : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸುವ ನಿಟ್ಟಿನಲ್ಲಿ ಬೇವಿನಮಟ್ಟಿ ಗ್ರಾಮದಲ್ಲಿ ಮುಂಬತ್ತಿ ಬೆಳಕಿನಲ್ಲಿ ಭಾರತ ನಕ್ಷೆ ಅರಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಸ್ವೀಪ್ ವತಿಯಿಂದ ಬೇವಿನಮಟ್ಟಿಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತದಾನ ಪ್ರಕ್ರಿಯೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಹಬ್ಬದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಪಾಲ್ಗೊಳ್ಳಬೇಕು. ಎಪ್ರೀಲ್ ೯ ರಂದು ಜರುಗಲಿರುವ ಮತದಾನ ದಿನ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿತು ಪ್ರಜಾಪ್ರಭುತ್ವ ಸದೃಡಗೊಳಿಸಬೇಕು. ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿ ಹಾಗೂ ಅರಿವು ಮೂಡಿಸುವುದಕ್ಕಾಗಿ ವಿವಿಧ ಕಾರ್ಯಕ್ರಮಗಳ ರೂಪಿಸಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಆದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕುರೇರ ಅವರು  ಅರ್ಹ ಮತದಾರರಿಗೆ ಪ್ರತಿಜ್ಞಾವಿಧಿ ಬೋದಿಸಿ ನಂತರ ಮಾತನಾಡಿದ ಅವರು ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡಬೇಕು. ತಮ್ಮ ಕುಟುಂಬ ವರ್ಗದವರಿಗೂ ಮತದಾನದ ಮಹತ್ವದ ಕುರಿತು ತಿಳಿಸುವ ಮೂಲಕ ಮತದಾನ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸಬೇಕು. ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವ ನಿಟ್ಟಿನಲ್ಲಿ ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ  ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ ಮತದಾನದ ಮಹತ್ವವನ್ನು ತಿಳಿಸುವ ಮೂಲಕ ಪ್ರತಿಯೊಬ್ಬರೂ ಮತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಪ್ರಾರಂಭದಲ್ಲಿ ಮುಂಬತ್ತಿ ಬೆಳಕಿನಲ್ಲಿ ಭಾರತ ನಕ್ಷೆಯನ್ನು ಅರಳಿಸಲಾಯಿತು. ರಂಗೋಲಿಯಲ್ಲಿ ಭಾರತ ನಕ್ಷೆಯನ್ನು ಬಿಡಿಸುವ ಮೂಲಕ ಅದರಲ್ಲಿ ಮತದಾನ ದಿನ ಮೂಡಿಸಲಾಗಿತ್ತು. ಇದರ ಜೊತೆಗೆ ನಮ್ಮ ಮತ ಮಾರಾಟಕ್ಕಿಲ್ಲ ಎಂದು ಬರೆದು ಮತದಾನರಲ್ಲಿ ಮಹತದಾನ ಮಹತ್ವ ಸಾರುವ ಕೆಲಸ ಜಿಲ್ಲಾ ಸ್ವೀಪ್ ವತಿಯಿಂದ ಮಾಡಲಾಯಿತು.
ಅಭಿಯಾನದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾಂವಿ, ಆಡಳಿತಾಧಿಕಾರಿ ಹಾಗೂ ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ರವಿ ಇದ್ದಲಗಿ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಬೇವಿನಮಟ್ಟಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article