ಓರ್ವಾಯಿ, ಗೆಣಿಕೆಹಾಳ್ ಗ್ರಾಪಂ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ ಜಾಥಾ ಮೂಲಕ ಮತದಾನ ಜಾಗೃತಿ

Ravi Talawar
ಓರ್ವಾಯಿ, ಗೆಣಿಕೆಹಾಳ್ ಗ್ರಾಪಂ ವ್ಯಾಪ್ತಿಯಲ್ಲಿ ಎತ್ತಿನ ಬಂಡಿ ಜಾಥಾ ಮೂಲಕ ಮತದಾನ ಜಾಗೃತಿ
WhatsApp Group Join Now
Telegram Group Join Now

ಬಳ್ಳಾರಿ,ಏ.18: ಮೇ 07 ರಂದು ಲೋಕಸಭಾ ಚುನಾವಣೆಗೆ ಗ್ರಾಮದ ಎಲ್ಲಾ ನಾಗರಿಕರು, ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಿ ಎಂದು ಗೆಣಿಕೆಹಾಳ್ ಗ್ರಾಮ ಪಂಚಾಯತ್ ಅಧಿಕಾರಿ ಜಯಲಕ್ಷ್ಮಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಓರ್ವಾಯಿ, ಗೆಣಿಕೆಹಾಳ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಂಗವಾಗಿ ಹಮ್ಮಿಕೊಂಡಿದ್ದ ಎತ್ತಿನ ಬಂಡಿಯ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮದ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಈ ವೇಳೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article