ವಾಟರ್‌ ಬಾಟಲ್‌ ನೀರು ಕುಡಿಯಲು ಯೋಗ್ಯವಲ್ಲ; ಆಹಾರ ಇಲಾಖೆ ಆಘಾತಕಾರಿ ವರದಿ ಬಹಿರಂಗ

Ravi Talawar
ವಾಟರ್‌ ಬಾಟಲ್‌ ನೀರು ಕುಡಿಯಲು ಯೋಗ್ಯವಲ್ಲ; ಆಹಾರ ಇಲಾಖೆ ಆಘಾತಕಾರಿ ವರದಿ ಬಹಿರಂಗ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 8: ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ  ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಇದೀಗ ವಾಟರ್ ಬಾಟಲ್ ನೀರಿನ ಸರದಿ. ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ವರದಿ ತಿಳಿಸಿದೆ. ಜತೆಗೆ, ಕೋವಾ ಕೂಡ ಕಲಬೆರಕೆಯುಕ್ತ ಎಂದು ತಿಳಿಸಿದೆ.

ಕೋವಾದಲ್ಲೂ ಕಲಬೆರಕೆ ಪತ್ತೆ: ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ. ಇದರೊಂದಿಗೆ ಪನೀರ್ ನಂತರ ಇದೀಗ ಕೋವಾ ಕೂಡ ಆರೋಗ್ಯಕ್ಕೆ ಮಾರಕ ಎಂಬುದು ಬೆಳಕಿಗೆ ಬಂದಂತಾಗಿದೆ.

ಮತ್ತೊಂದೆಡೆ, ಈಗಾಗಲೇ ಪನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರಿಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪನೀರ್ ಹಾಗೂ ಐಸ್ ಕ್ರೀಮ್ ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.

WhatsApp Group Join Now
Telegram Group Join Now
Share This Article