ಎತ್ತಿನಹೊಳೆ ಯೋಜನೆ  ಪೂರ್ಣಗೊಳಿಸಲು 500 ಎಕರೆ ಭೂಮಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್

Ravi Talawar
ಎತ್ತಿನಹೊಳೆ ಯೋಜನೆ  ಪೂರ್ಣಗೊಳಿಸಲು 500 ಎಕರೆ ಭೂಮಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್
WhatsApp Group Join Now
Telegram Group Join Now

ಬೆಂಗಳೂರು, ಜೂನ್ 14: ಎತ್ತಿನಹೊಳೆ ಯೋಜನೆ  ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ  ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್  ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಸಮನ್ವಯ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಈಗ ಅರಣ್ಯ ಇಲಾಖೆಯು ಭೂಮಿಯನ್ನು ನೀಡಲು ಒಪ್ಪಿಗೆ ನೀಡಿದ್ದು, ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ ಪರ್ಯಾಯವಾಗಿ 500 ಎಕರೆಯನ್ನು ಬೇರೆ ಸ್ಥಳದಲ್ಲಿ ನೀಡಲಿದೆ. ನಾವು ಈ ಪ್ರಕ್ರಿಯೆಯನ್ನು ಕಾನೂನಿನ ಚೌಕಟ್ಟಿನ ಒಳಗೆಯೇ ಪೂರ್ಣಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಮನಿಸಿ ಗುರುತಿಸಿಕೊಳ್ಳಲಾಗಿದೆ. 60 ಕಿ.ಮೀ ವ್ಯಾಪ್ತಿಯಲ್ಲಿ ಕನಿಷ್ಠ 20 ಸಮಸ್ಯೆಗಳನ್ನು ಪರಿಹರಿಸಬೇಕು. ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆಗಳೊಂದಿಗೆ ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಎಂದು ಶಿವಕುಮಾರ್ ಹೇಳಿದ್ದಾರೆ.

 

WhatsApp Group Join Now
Telegram Group Join Now
Share This Article