`ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ’ – ಅಸುಂಡಿ  ಗ್ರಾಮಸ್ಥರ ಪ್ರತಿಭಟನೆ

Hasiru Kranti
`ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ’ – ಅಸುಂಡಿ  ಗ್ರಾಮಸ್ಥರ ಪ್ರತಿಭಟನೆ
WhatsApp Group Join Now
Telegram Group Join Now
 ಬಳ್ಳಾರಿ,ಡಿ.30.. ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಅಸುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ‘ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ೪೦,೦೦೦ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಕಕ್ಕಬೇವಿನಹಳ್ಳಿಯ ಪ್ರೌಢಶಾಲೆಯನ್ನು ಕೆಪಿಎಸ್-ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಅಸುಂಡಿ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. ಅಸುಂಡಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವುದು ಸರ್ಕಾರವು ಬಡವರ ಮಕ್ಕಳಿಗೆ ಮಾಡುವ ದ್ರೂಹ. ಹಾಗೆ ಈ ಶಾಲೆಯ ಮಕ್ಕಳಿಗೆ ಕೊಠಡಿ ಸಂಖ್ಯೆ ಕಡಿಮೆ ಇದೆ, ಈ ಊರಿಗೆ ಪ್ರೌಢಶಾಲೆ ಅಗತ್ಯ ಇದ್ದು, ಈ ಕೆಲಸವನ್ನು ಕೂಡಲೇ ಮಾಡಲಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರಿದು ಹಾಗೆ ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ನಾವು ಬಿಡುವುದಿಲ್ಲ. ‘ಸರ್ಕಾರಿ ಶಾಲೆಗಳು ನಮ್ಮ ಹಕ್ಕು, ನಮ್ಮ ಹಕ್ಕು ಎಂದು ಎಚ್ಚರಿಕೆ ನೀಡಿದರು.
ಕೆಪಿಎಸ್-ಮ್ಯಾಗ್ನೆಟ್ ಹೆಸರಲ್ಲಿ ನಮ್ಮ ಗ್ರಾಮ ಮಾತ್ರವಲ್ಲದೆ ಸುತ್ತಲಿನ ಹಲವು ಗ್ರಾಮಗಳ ಶಾಲೆಗಳನ್ನು ವಿಲೀನ ಮಾಡಲು ನಿರ್ಧರಿಸಲಾಗಿದೆ. ಹಾಗಾಗಿ ನಾವು ಒಂದಾಗಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ಕೆ. ಈರಣ್ಣ ಮತ್ತು ಸರ್ಕಾರಿ ಶಾಲೆ ಉಳಿಸಿ ಸಮಿತಿಯ ಸದಸ್ಯರಾದ ಬಸವರಾಜ್, ಹೊನ್ನೂರ್ ಸ್ವಾಮಿ, ಮೋಹನ್, ಬಸವರಾಜ ಸ್ವಾಮಿ, ಭಾಷಾ ಮತ್ತು ಇನ್ನಿತರ ಗ್ರಾಮಸ್ಥರು ಭಾಗವಹಿಸಿದ್ದರು ಹಾಗೂ ೩೦೦ಕ್ಕೂ ಹೆಚ್ಚು ಊರಿನ ಗ್ರಾಮಸ್ಥರು, ಯುವಕರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article