ಕಲ್ಯಾಣ ಕರ್ನಾಟಕ ಅಭಿವೃದ್ಧಿಗೊಳಿಸಿ ಜಲ್ಸರ್ ಪಾರ್ಟಿ ಆಫ್ ಇಂಡಿಯಾ ಜಾಗೃತಿ ಜಾಥ

Ravi Talawar
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೊಳಿಸಿ ಜಲ್ಸರ್ ಪಾರ್ಟಿ ಆಫ್ ಇಂಡಿಯಾ ಜಾಗೃತಿ ಜಾಥ
WhatsApp Group Join Now
Telegram Group Join Now
 ಬಳ್ಳಾರಿ.ಅ. 07.: ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಯಾಗಿಲ್ಲ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕ ಸಂವಿಧಾನದ 98ನೇ ತಿದ್ದುಪಡಿ ಮೂಲಕ 2013ರಲ್ಲಿ 371 ಜೆ ವಿಶೇಷ ಸ್ಥಾನಮಾನ ದೊರೆತು 12 ವರ್ಷಗಳಲ್ಲಿ 25 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಸಹ ಅಭಿವೃದ್ಧಿ ಕೆಲಸಗಳಾಗಿಲ್ಲ ಈ ಭಾಗದ ಕಾರ್ಮಿಕರು ಕೆಲಸಕ್ಕಾಗಿ ಗುಳೆ ಹೋಗುವುದು ತಪ್ಪಿಲ್ಲ ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಕ್ಕಿಲ್ಲ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳಿಲ್ಲ ಅಪೌಷ್ಟಿಕತೆಯಿಂದ ಬಾಣಂತಿಯರು ಮತ್ತು ಮಕ್ಕಳು ಸಾವುಗಳಾಗುತ್ತಿವೆ ಅನ್ನದಾತನ ಆತ್ಮಹತ್ಯೆಗಳಾಗುತ್ತಿವೆ ಹಿಂದುಳಿದ ಅಲ್ಪಸಂಖ್ಯಾತ ದಲಿತ ಆದಿವಾಸಿಗಳಿಗೆ ಇನ್ನೂ ಸಹ ಸಾಮಾಜಿಕ ನ್ಯಾಯ ದೊರಕಿಲ್ಲ ಸರ್ಕಾರ ಪ್ರತಿಬಾರಿ ಹೊಸ ಯೋಜನೆಗಳನ್ನು ಜಾರಿಗೆ ತಂದರು ದೊಡ್ಡ ಅನುದಾನಗಳನ್ನು ಘೋಷಣೆ ಮಾಡಿದರು ಸಹ ಅವುಗಳಿಂದ ಈ ಭಾಗಕ್ಕೆ ಏನೇನು ಪ್ರಯೋಜನವಾಗಿಲ್ಲ ಸರ್ಕಾರ ಈ ಭಾಗದ ಜನತೆಗೆ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದರು.
 ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಕೊಪ್ಪಳ ರಾಯಚೂರು ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಗಳು ಅತ್ಯಂತ ಹಿಂದುಳಿದ ಜಿಲ್ಲೆಗಳಾಗಿದ್ದು ಈ ಜಿಲ್ಲೆಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 9,000 ಶಿಶು ಮತ್ತು 600 ತಾಯಂದಿರು ಪೋಷಕಾಂಶಗಳ ಕೊರತೆಯಿಂದ ಅಸೂಲಿಗಿರುತ್ತಾರೆ 1963 ಆರೋಗ್ಯ ಕೇಂದ್ರಗಳ ಅವಶ್ಯಕತೆ ಇದ್ದು ಈಗ ಕೇವಲ 1519 ಕೇಂದ್ರಗಳಿವೆ  ಇವುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು, ಖಾಲಿ ಇರುವ 80000 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು, ಅವಶ್ಯಕತೆ ಇರುವ ವಿದ್ಯಾರ್ಥಿ ನೆಲೆಗಳನ್ನು ಆರಂಭಿಸಬೇಕು ಮಾನವ ಅಭಿವೃದ್ಧಿ ಸೂಚ್ಯಂಕ ಮತ್ತು ತಲಾ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಈ ಪ್ರದೇಶವನ್ನು ಅಭಿವೃದ್ಧಿಗೊಳಿಸಬೇಕು ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಮಾಡಿಕೊಡಬೇಕು ಎಂಬ 11 ಅಂಶಗಳ ಬೇಡಿಕೆಯನ್ನು  ರಾಜ್ಯ ಸರ್ಕಾರದ ಮುಂದಿಟ್ಟು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜಾತವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
 ಈ ಪತ್ರಿಕಾಗೋಷ್ಠಿಯಲ್ಲಿ  ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಸೈಯದ್ ಅಮ್ಜದ್ ಹುಸೇನ್, ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲಿಯಾನ್ ಸೈಯದ್ ಇರ್ಫಾನ್ ಸೇರಿದಂತೆ ಇತರರಿದ್ದರು.
WhatsApp Group Join Now
Telegram Group Join Now
Share This Article