ಹಾಸನ, ಆ.11: ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಇನ್ನು ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿ, ಸಿಡಿಲು ಬಡಿದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಗಾಯವಾಗಿದ್ದು, ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.
ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಜನರಲ್ಲಿ ಆತಂಕ ಮೂಡಿದೆ. ಹೌದು, ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂದಿನ ಮನೆಯ ಗೇಟ್ ಹಾರಿ ಸಾಕು ನಾಯಿಯನ್ನ ಚಿರತೆ ಬೇಟೆಯಾಡಿದೆ. ಪ್ರತಿರೋಧ ಒಡ್ಡಿದರೂ ಬಿಡದೆ ಕೊಂದು ಹೊತ್ತೊಯ್ದಿದೆ. ಮನೆಗಳಿಗೆ ಚಿರತೆ ನುಗ್ಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ. ರಾತ್ರಿ ವೇಳೆ ಚಿರತೆ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ನಿನ್ನೆ(ಶನಿವಾರ) ಮಹಿಳೆ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಹಿನ್ನಲೆ ಚಿರತೆ ಸೆರೆ ಹಿಡಿಯುವಂತೆ ರಾಮನಗರ ಜನರು ಒತ್ತಾಯ ಮಾಡಿದ್ದಾರೆ.