ಮಂಗಳೂರು, ಫೆಬ್ರವರಿ 27: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್ಇನ್ಸ್ಪೆಕ್ಟರ್ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.