ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಗರ್ಭಗುಡಿಯಲ್ಲಿ ಮೊದಲ ಮಳೆಗೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕಲು ಶುರುವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.
ದೇವಾಲಯದ ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ಶನಿವಾರ ಮಧ್ಯರಾತ್ರಿ ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು ಮತ್ತು ದೇವಾಲಯದ ಅಧಿಕಾರಿಗಳು ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ, ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಲು ಸೂಚನೆ ನೀಡಿದ್ದಾರೆ.