ಜಾತಿ ರಾಜಕಾರಣಕ್ಕೆ ಮಹತ್ವ ನೀಡದೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಮಹತ್ವ ನೀಡಿ: ಶಾಸಕ ರಮೇಶ ಜಾರಕಿಹೊಳಿ

Ravi Talawar
ಜಾತಿ ರಾಜಕಾರಣಕ್ಕೆ ಮಹತ್ವ ನೀಡದೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಮಹತ್ವ ನೀಡಿ: ಶಾಸಕ ರಮೇಶ ಜಾರಕಿಹೊಳಿ
WhatsApp Group Join Now
Telegram Group Join Now

ಗೋಕಾಕ, ಏಪ್ರಿಲ್​ 08: ನಾನು ಜಾತಿ ರಾಜಕಾರಣ ಮಾಡದೆ ಬಸವತತ್ವದಲ್ಲಿ ವಿಶ್ವಾಸವಿಟ್ಟು ಜನರ ಸೇವೆ ಮಾಡುತ್ತಿದ್ದೇನೆ. ಜನಪ್ರತಿನಿಧಿಗಳಾಗಲು ಎಲ್ಲ ಸಮುದಾಯಗಳ ಆಶೀರ್ವಾಧ ಅತಿಅವಶ್ಯ. ಜಾತಿ ರಾಜಕಾರಣಕ್ಕೆ ಮಹತ್ವ ನೀಡದೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಜಗದೀಶ ಶೆಟ್ಟರ ಅವರಿಗೆ ತಮ್ಮ ಮತ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

‘ನಗರದಲ್ಲಿ ಆಯೋಜಿಸಿದ್ಧ ಗೋಕಾಕ ಮತಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ತಮ್ಮ ಅಧಿಕಾರವಧಿಯಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿದ್ದಾರೆ. ಕೆಲವರು ಬ್ಯಾಂಕ ಹಾಗೂ ಸೋಸೈಟಿಗಳ ದುರ್ಬಳಕೆಯಿಂದ ಹಣಬಲ ತೋರಿಸುತ್ತಿದ್ದು ಮುಂದಿನ ದಿನಗಳಲ್ಲಿ ಸಿಬಿಐ ತನಿಖೆಯ ಮೂಲಕ ವಾಸ್ತವಿಕತೆಯನ್ನು ಜನರ ಮುಂದಿಡಲು ಒತ್ತಾಯಿಸುವದಾಗಿ ತಿಳಿಸಿದರು.

ಭಾರತೀಯ ಜನತಾ ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿ ಗೋಕಾಕ ಮತಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲು ಸಹಕಾರ ನೀಡಿದೆ. ಕೇಂದ್ರದ ನಾಯಕರ ನನ್ನ ಮೇಲೆ ಹೆಚ್ಚಿನ ವಿಶ್ವಾಸವಿಟ್ಟಿದ್ದು ಅದನ್ನು ಉಳಿಸಲು ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಅತ್ಯಧಿಕ ಅಂತರದಲ್ಲಿ ಆರಿಸಬೇಕು. ಅವರ ಜಯದಿಂದ ನನಗೆ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೂ ಹೆಚ್ಚಿನ ಶಕ್ತಿ ದೊರೆತು ಕ್ಷೇತ್ರದ ಮತ್ತು ಜಿಲ್ಲೆಯ ಅಭಿವೃದ್ಧಿ ಕಾರ್ಯ ಮಾಡಲು ಸಹಕಾರಿಯಾಗುತ್ತದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಮಾತನಾಡುತ್ತ ಕಾಂಗ್ರೇಸ್‌ನವರು ನಾಟಕೀಯ ಹಿಂದುತ್ವ ತೋರಿಸದೇ ಬಿಜೆಪಿ ಸರಕಾರ ಜಾರಿಗೆ ತಂದ ಮತಾಂತರ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತೋರಿಸುವ ಮೂಲಕ ಪ್ರಾಮಾಣಿಕ ಹಿಂದುತ್ವತೋರಿಸುವAತೆ ಸವಾಲು ಹಾಕಿದರು. ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುವ ೧೪೧ಕೋಟಿ ಜನರ ಕನಸು ನನಸು ಮಾಡುವ ಚುನಾವಣೆ ಇದಾಗಿದ್ದು, ಅದನ್ನು ನನಸಾಗಿಸಲು ಅವರ ಪ್ರತಿನಿಧಿಯಾಗಿ ಈ ಚುನಾವಣೆಯಲ್ಲಿ ಸ್ಫರ್ಧಿಸಿದ್ದೇನೆ ಎಂದು  ಹೇಳಿದರು.

ವೇದಿಕೆಯ ಮೇಲೆ ಸಂಸದೆ ಮಂಗಲಾ ಅಂಗಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಮಾಜಿ ಶಾಸಕ ಎಮ್ ಎಲ್ ಮುತ್ತೆನ್ನವರ, ಗೋಕಾಕ ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಬಿಜೆಪಿ ಮುಖಂಡರುಗಳಾದ ಎಮ್ ಬಿ ಜಿರಲಿ, ತುಬಾಕಿ, ಲಕ್ಷö್ಮಣ ತಪಸಿ, ಕೆ ವಿ ಪಾಟೀಲ, ಶಾಮಾನಂದ ಪೂಜೇರಿ, ಮುತ್ತೆಪ್ಪ ಮನ್ನಾಪೂರ, ಶಕೀಲ ಧಾರವಾಡಕರ, ಯುವರಾಜ ಜಾಧವ, ಶಿವಾನಂದ ಪಾಟೀಲ, ಪುಂಡಲೀಕ ವಣ್ಣೂರ ಇದ್ದರು.
ಶ್ರೀಮತಿ ರಾಜೇಶ್ವರಿ ಒಡೆಯರ ಒಡೆಯರ ಸ್ವಾಗತಿಸಿದರು. ಬಾಳೇಶ ಗಿಡ್ಡನವರ ವಂದಿಸಿದರು.

 

WhatsApp Group Join Now
Telegram Group Join Now
Share This Article