ಒಳಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನ: ಮಹಿಳೆಯರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

Ravi Talawar
ಒಳಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನ: ಮಹಿಳೆಯರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
WhatsApp Group Join Now
Telegram Group Join Now

ದೇವನಹಳ್ಳಿ, ಏಪ್ರಿಲ್​ 30: ಒಳ ಉಡುಪಿನಲ್ಲಿ ಚಿನ್ನಅಡಗಿಸಿಟ್ಟುಕೊಂಡು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತದ್ದ 49.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರು ಮಹಿಳೆಯರು ಸೋಮವಾರ (ಏ.29) ರಾತ್ರಿ ದುಬೈನಿಂದ ಇಂಡಿಗೋ 6E1486 ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಮಹಿಳೆಯರ ಒಳ ಉಡುಪಿನಲ್ಲಿ 49.52 ಲಕ್ಷ ರೂ. ಮೌಲ್ಯದ 717 ಗ್ರಾಂ ಚಿನ್ನ ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಸ್ಕಾರ್ಪಿಯೊ ಬಿದ್ದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಚಾಲಕ ಸಚಿನ್ (19) ಮೃತ ದುರ್ದೈವಿ. ಇನ್ನು ಗಾಯಳು ಬಲವಂತ್ ಸಿಂಗ್ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದು ಕಾರು ಚಾಲನೆ ಮಾಡಿದ ಚಾಲಕ ಟಾಟಾ ಎಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಗೊರಗುಂಟೆ ಪಾಳ್ಯ ಬಳಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್, ಗಾಂಜಾ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ದೊಡ್ಡಮಾರಪ್ಪನಹಳ್ಳಿ ಬಳಿ ನಡೆದಿದೆ. ಅಂಗರಹಳ್ಳಿ ನಿವಾಸಿ ರಘು (49) ಮೃತದುರ್ದೈವಿ. ಕಾಂತರಾಜು ಎಂಬಾತನಿಗೆ ಗಾಯವಾಗಿದೆ. ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

WhatsApp Group Join Now
Telegram Group Join Now
Share This Article