ಬೆಂಗಳೂರು, ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.