ಏಪ್ರಿಲ್ 18ರಿಂದ ರಾಜ್ಯದಲ್ಲಿ ಮಳೆ ಅಬ್ಬರ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Ravi Talawar
ಏಪ್ರಿಲ್ 18ರಿಂದ ರಾಜ್ಯದಲ್ಲಿ ಮಳೆ ಅಬ್ಬರ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್16: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಏಪ್ರಿಲ್ 18, 19ರಂದು ಧಾರಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಈ ಎರಡು ದಿನ ಎಲ್ಲಾ 31 ಜಿಲ್ಲೆಗಳಿಗೂ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ ಮೀಟರ್‌ ಬೀಸುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.

ಅಷ್ಟೇ ಅಲ್ಲದೆ ಮಂಗಳವಾರ (ಏಪ್ರಿಲ್‌ 16) ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಮತ್ತೊಂದೆಡೆ ಉತ್ತರ ಒಳನಾಡು ಹಾಗೂ ಮಲೆನಾಡುವ ಭಾಗದ ಹಲವು ಭಾಗಗಲ್ಲಿ ಬುಧವಾರ (ಏಪ್ರಿಲ್‌ 17) ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿ ಹಾಗೂ ರಾಯಚೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

 

WhatsApp Group Join Now
Telegram Group Join Now
Share This Article