ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ; ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ!

Ravi Talawar
ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ;  ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ!
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದಲ್ಲಿ ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

WhatsApp Group Join Now
Telegram Group Join Now
Share This Article