ಬೆಂಗಳೂರು,03: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ರಾಮನಗರ, ವಿಜಯಪುರ, ಕೊಡಗು, ಕೋಲಾರ, ಚಾಮರಾಜನಗರ, ಚಾಮರಾಜನಗರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಜಿಕೆವಿಕೆ, ಗಂಗಾವತಿ, ಬೆಂಗಳೂರು, ದೇವನಹಳ್ಳಿ, ಮಿಡಿಗೇಶಿ, ಚಾಮರಾಜನಗರ, ಉಡುಪಿ, ಎಚ್ಡಿಕೋಟೆ, ಗುಬ್ಬಿ, ಮದ್ದೂರು, ಚಿಂತಾಮಣಿ, ಹೆಸರಘಟ್ಟ, ಪರಶುರಾಂಪುರ, ಕುಮಟಾ, ದೇವರಹಿಪ್ಪರಗಿ, ಕೃಷ್ಣರಾಜಪೇಟೆ, ಶ್ರವಣಬೆಳಗೊಳ, ಕೋಲಾರ, ಕೊಳ್ಳೇಗಾಲ, ರಾಮನಗರ, ರಾಯಲ್ಪಾಡುವಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.