ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Ravi Talawar
ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
WhatsApp Group Join Now
Telegram Group Join Now

ಬೆಂಗಳೂರು, ಮೇ 02: ಕರ್ನಾಟಕದಾದ್ಯಂತ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಇಂದು ಗೂಡ ಗುಡುಗು ಸಹಿತ ಮಳೆಯಾಗಲಿದೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ.

ಬೆಂಗಳೂರು, ಕೆಆರ್​ಪೇಟೆ, ಹಿರಿಯೂರು, ಟಿಜಿ ಹಳ್ಳಿ, ಮೈಸೂರು, ಗುಬ್ಬಿ, ಬೆಳ್ತಂಗಡಿ, ಸುಳ್ಯ, ನಾಗಮಂಗಲ, ಗೌರಿಬಿದನೂರು, ತೊಂಡೆಬಾವಿ, ಕೃಷ್ಣರಾಜಸಾಗರ, ಉಪ್ಪಿನಂಗಡಿ, ಮದ್ದೂರು, ಬಾಳೆಹೊನ್ನೂರು, ಕೊಟ್ಟಿಗೆಹಾರ, ಚಿತ್ರದುರ್ಗ, ಕುಣಿಗಲ್​ನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Group Join Now
Telegram Group Join Now
Share This Article