ಬೆಳಗಾವಿ: ನಗರದ ಬೈಲಹೊಂಗಲದ ಬಿಬಿ ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಜುಲೈ 27ರಂದು ಭಾನುವಾರ ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ
ಯುವಕರನ್ನು ಜಾಗೃತಗೊಳ್ಳಿಸಲು “ಯುವ ಪರ್ವ ಪ್ರತಿಜ್ಞೆ” ಸಮಾರಂಭದ ಆಯೋಜಿಸಲಾಗಿದೆ.
ಜುಲೈ 27ರಂದು ಬೈಲಹೊಂಗಲದಲ್ಲಿ ನಡೆಯಲಿರುವ ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ನ ಪದಗ್ರಹಣ, ಯುವ ಪರ್ವ ಪ್ರತಿಜ್ಞೆ ಸಮಾರಂಭವನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದಾರೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಕಾರ್ಯಕ್ರಮದಲ್ಲಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ಶಾಸಕರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ಬಾಬಾಸಾಹೇಬ್ ಪಾಟೀಲ್, ವಿಶ್ವಾಸ್ ವೈದ್ಯ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಭಾರತೀಯ ಯುವ ಕಾಂಗ್ರೆಸ್ ಮತ್ತು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಬಂಡಾರಿ, ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಮಹಾಂತೇಶ ಕಡ್ಡಾಡಿ, ಅರವಿಂದ್ ದಳವಾಯಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಅಬ್ದುಲ್ ದೇಸಾಯಿ, ಮೃಣಾಳ ಹೆಬ್ಬಾಳಕರ್ , ಸಮಾರಂಭದಲ್ಲಿ ಪಾಲ್ಗೊಳ್ಳುವವರು ಎಂದು ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ ಅವರು ಮಾಹಿತಿ ನೀಡಿದರು