ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು ಎಂದು ಯುವಕ ಪೋಸ್ಟ್‌; ಪೊಲೀಸರು ಕ್ರಮ

Ravi Talawar
ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು ಎಂದು ಯುವಕ ಪೋಸ್ಟ್‌; ಪೊಲೀಸರು ಕ್ರಮ
WhatsApp Group Join Now
Telegram Group Join Now
 

ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

“ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ವೈರಲ್ ವಿಡಿಯೋದಲ್ಲಿ ನವಾಜ್ ಹೇಳಿದ್ದಾನೆ.

ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ವೈರಲ್ ಮಾಡಿದ್ದ. ಇದನ್ನು ಆಧರಿಸಿ ಬಂಡೆಪಾಳ್ಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
Share This Article